Saturday, July 16, 2016

ನೀ ಹಿಂಗ ನೋಡಬ್ಯಾಡ ನನ್ನ

ರಚನೆ: ವರಕವಿ "ದ.ರಾ.ಬೇಂದ್ರೆ "
ಗಾಯನ: ರಾಜಕುಮಾರ್ ಭಾರತಿ


ಅಂ ಅಂ....  ಅಂ .... ಅಂ... ಅಂ....
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ !

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ !

ದಾರೀಲೆ ನೆನೆದೆ.. ಕೈ ಹಿಡಿದೆ ನೀನು
ತಣ್ಣಾಗ ಅಂತ ನಾ ತಿಳಿದು..
ಬಿಡವಲ್ಲಿ ಇನ್ನೂನು ಬೂದಿ ಮುಚ್ಚಿದ ಕೆಂಡಾ ಇದಂತಾ ಹೊಳೆದು
ಮುಗಿಲಿನ ಕಪ್ಪರಿಸಿ ನೆಲಕ ಬಿದ್ದರಾ ನೆಲಕ ನೆಲಿ ಎಲ್ಲಿನ್ನ ?
ಆ ಗಾದಿಮಾತು ನಂಬಿ ನಾನು ದೇವರಂತ ತಿಳಿದಿಯೇನ ನೀ ನನ್ನ ?


ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ !

ಇಬ್ಬನಿ ತೊಳೆದರು ಹಾಲು ಮೆತ್ತಿದಾ ಕವಳ ಕಾಂಟೆಯಾ ಹಣ್ಣು
ಹೊಳೆ ಹೊಳೆವ ಹಾಂಗ ಕಣ್ಣಿರುವ ಹೆಣ್ಣ ಹೇಳು ನಿನ್ನವೇನ ಈ ಕಣ್ಣು?
ದಿಲಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣಿಮೆ ಚಂದಿರನ ಹೆಣಾ ಬಂತು ಮುಗಿಲಾಗ ತೇಲತಾ  ಹಗಲ

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ !

ನಿನ್ನ ಕಣ್ಣಿನ್ಯಾಗ ಕಾಲೂರಿ ಮಳೆಯು ನಡ-ನಡಕ ಹುಚ್ಚು ನಗಿ ಯಾಕ?
ಹನಿಒಡೆಯಲಿಕ್ಕ ಬಂದಂತ ಮೋಡ ತಡೆದ್ಹಾಂಗ ಗಾಳಿಯಾ ನೆವಕ
ಅತ್ತಾರೆ ಅತ್ತು ಬಿಡು ಹೊನಲು ಬರಲಿ ನಕ್ಕ್ಯಾಕೆ ಮರಸತೀ ದುಃಖ
ಎದೆ ಬಡಿಸಿ ಕೆಡವು ಬಿರಿಗಣ್ಣು ಬ್ಯಾಡ ತುಟಿ ಕಚ್ಚಿ ಹಿಡಿಯದಿರು ಬಿಕ್ಕ

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ !

ನೀ ಹೀಂಗ ನೋಡಬ್ಯಾಡ ನನ್ನ
ನೀ....  ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ !
ಅಂ ಅಂ....  ಅಂ .... ಅಂ... ಅಂ....