ಹಾಡು: ಓ ನನ್ನ ಚೇತನ
ರಚನೆ: ರಾಷ್ಟ್ರಕವಿ ಕುವೆಂಪು
ಗಾಯನ: ಶ್ರೀ ಮೈಸೂರು ಅನಂತಸ್ವಾಮಿ
ಸಂಗ್ರಹ: ಭಾವ ಸಂಗಮ
ಓ ನನ್ನ ಚೇತನ,
ಆಗು ನೀ ಅನಿಕೇತನ!
ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವ ದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ವದಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ಎಲ್ಲಿಯೂ ನಿಲ್ಲದಿರು;
ಮನೆಯನೆಂದೂ ಕಟ್ಟದಿರು ;
ಕೊನೆಯನೆಂದೂ ಮುಟ್ಟದಿರು;
ಓ ಅನಂತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!
ಅನಂತ ತಾನ್ ಅನಂತವಾಗಿ,
ಆಗುತಿಹನು ನಿತ್ಯಯೋಗಿ;
ಅನಂತ ನೀ ಅನಂತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!
ರಚನೆ: ರಾಷ್ಟ್ರಕವಿ ಕುವೆಂಪು
ಗಾಯನ: ಶ್ರೀ ಮೈಸೂರು ಅನಂತಸ್ವಾಮಿ
ಸಂಗ್ರಹ: ಭಾವ ಸಂಗಮ
ಓ ನನ್ನ ಚೇತನ,
ಆಗು ನೀ ಅನಿಕೇತನ!
ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವ ದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ವದಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ಎಲ್ಲಿಯೂ ನಿಲ್ಲದಿರು;
ಮನೆಯನೆಂದೂ ಕಟ್ಟದಿರು ;
ಕೊನೆಯನೆಂದೂ ಮುಟ್ಟದಿರು;
ಓ ಅನಂತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!
ಅನಂತ ತಾನ್ ಅನಂತವಾಗಿ,
ಆಗುತಿಹನು ನಿತ್ಯಯೋಗಿ;
ಅನಂತ ನೀ ಅನಂತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!
No comments:
Post a Comment