Sunday, August 26, 2018

ಯಾವ ಮೋಹನ ಮುರಳಿ ಕರೆಯಿತು

ರಚನೆ: ಎಂ. ಗೋಪಾಲಕೃಷ್ಣ ಅಡಿಗ 
ಗಾಯನ: ರತ್ನಮಾಲಾ ಪ್ರಕಾಶ್, ರಾಜು ಅನಂತಸ್ವಾಮಿ & ಸಂಗೀತ ಕಟ್ಟಿ 
ಸಂಗೀತ: ಮನೋಮೂರ್ತಿ

ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು ?
ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು ? //ಪ//

ಹೂವು ಹಾಸಿಗೆ ಚಂದ್ರ ಚಂದನ,
ಬಾಹು ಬಂಧನ, ಚುಂಬನ ;
ಬಯಕೆ ತೋಟದ ಬೇಲಿಯೊಳಗೆ
ಕರಣಗಳದೀ ರಿಂಗಣ; //೧//

ಸಪ್ತ ಸಾಗರದಾಚೆ ಎಲ್ಲೊ..
ಸುಪ್ತ ಸಾಗರ ಕಾದಿದೆ
ಮೊಳೆಯದೆಲೆಗಳ ಮೂಕ ಮರ್ಮರ
ಇಂದು ಇಲ್ಲಿಗೂ ಹಾಯಿತೆ? //೨//

ವಿವಶವಾಯಿತು ಪ್ರಾಣ - ಹಾ: !!
ಪರವಶವು ನಿನ್ನೀ ಚೇತನ;
ಇರುವುದೆಲ್ಲವ ಬಿಟ್ಟು
ಇರದುದರೆಡೆಗೆ ತುಡಿವುದೇ ಜೀವನ? //೩//

ಯಾವ ಮೋಹನ ಮುರಳಿ ಕರೆಯಿತು
ಇದ್ದಕಿದ್ದಲೇ ನಿನ್ನನು?
ಯಾವ ಬೃಂದಾವನವು ಚಾಚಿತು
ತನ್ನ ಮಿಂಚಿನ ಕೈಯನು? //೪//

ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು....




No comments:

Post a Comment