Sunday, March 31, 2019

ಭಕ್ತಿ ಗೀತೆ - ಅಂಬಿಗ ನಾ ನಿನ್ನ ನಂಬಿದೆ



ರಚನೆ: ಪುರಂದರ ದಾಸರು 


ಅಂಬಿಗ ನಾ ನಿನ್ನ ನಂಬಿದೆ
ಜಗದಂಬಾರಮಣನ ನಿನ್ನ ನಂಬಿದೆ||

ತುಂಬಿದ ಹರಿಗೋಲಂಬಿಗ
ಅದಕೊಂಭತ್ತು ಛಿದ್ರವು ಅಂಬಿಗ
ಸಂಭ್ರಮದಿಂ ನೋಡಂಬಿಗ
ಅದರಿಂಬು ನೋಡಿ ನಡೆಸಂಬಿಗ||1||

ಹೊಳೆಯ ಭರವ ನೋಡಂಬಿಗ
ಅದಕೆ ಸೆಳವು ಘನವಯ್ಯ ಅಂಬಿಗ
ಸುಳಿಯೊಳು ಮುಳುಗಿದೆ ಅಂಬಿಗ
ಎನ್ನ ಸೆಳೆದು ಕೊಂಡೊಯ್ಯೊ ನೀನಂಬಿಗ||2||

ಆರು ತೆರೆಯ ನೋಡಂಬಿಗ
ಅದು ಮೀರಿ ಬರುತಲಿದೆ ಅಂಬಿಗ
ಯಾರಿಂದಲಾಗದು ಅಂಬಿಗ
ಅದ ನಿವಾರಿಸಿ ದಾಟಿಸೋ ಅಂಬಿಗ||3||

ಸತ್ಯವೆಂಬುದೆ ಹುಟ್ಟು ಅಂಬಿಗ
ಸದಾ ಭಕ್ತಿಯೆಂಬುದೆ ಪಥ ಅಂಬಿಗ
ನಿತ್ಯ ಮೂರುತಿ ಪುರಂದರ ವಿಠಲ
ನಮ್ಮ ಮುಕ್ತಿ ಮಂಟಪಕೊಯ್ಯೊ ಅಂಬಿಗ||4||

OR

ಸತ್ವ ಪಥದೊಳಗೆ ಅಂಬಿಗ
ಪರಾ ಭಕ್ತಿ ಹುಟ್ಟನು ಹಾಕಿ ಅಂಬಿಗ
ಮುಕ್ತಿದಾಯಕ ನಮ್ಮ ಪುರಂದರ ವಿಟ್ಠಲನ
ಮುಕ್ತಿ ಮಂಟಪಕೊಯ್ಯೋ ಅಂಬಿಗ||4||

No comments:

Post a Comment